Tuesday, March 28, 2023

Latest Posts

ಅದಾನಿ ಸಂಸ್ಥೆಗಳ ವಿರುದ್ಧ ತನಿಖೆಗಾಗಿ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಫೆ. 17 ರಂದು ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅದಾನಿ ಸಂಸ್ಥೆಗಳ (Adani Group) ವಿರುದ್ಧ ತನಿಖೆ ನಡೆಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಡಾ.ಜಯಾ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಫೆಬ್ರವರಿ 17 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ನೀಡಿದೆ.

ಅದಾನಿ ಸಮೂಹದ ವಿರುದ್ಧದ ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯ ಆಧಾರದ ಮೇಲೆ ವಿವಿಧ ಕಾನೂನುಗಳ ಅಡಿಯಲ್ಲಿ ಅದಾನಿ ಸಮೂಹದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಮಧ್ಯಪ್ರದೇಶ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತುರ್ತು ವಿಚಾರಣೆ ಕೋರಿದ ನಂತರ ಫೆಬ್ರವರಿ 17 ರಂದು ಈಗಾಗಲೇ ವಿಚಾರಣೆಗೆ ನಿಗದಿಪಡಿಸಲಾದ ವಿಷಯದ ಕುರಿತು ಇತರ ಎರಡು ಪಿಐಎಲ್‌ಗಳೊಂದಿಗೆ ಅದನ್ನು ವಿಚಾರಣೆ ನಡೆಸಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!