ಮನೆ ನಿರ್ಮಾಣ ಕಾಮಗಾರಿಯಲ್ಲಿ ಹಗರಣ, ಬಡವರ ಹೆಸರಲ್ಲಿ ಹಣ ಲೂಟಿ: ಬಿ.ಸಿ. ಪಾಟೀಲ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರ್ವಜನಿಕರಿಗೆ ಸಹಾಯಹಸ್ತ ಚಾಚಬೇಕಾದ ಸರ್ಕಾರ ಮತ್ತು ಅಧಿಕಾರಿಗಳು, ಬಡವರ ಹೆಸರಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಆರೋಪಿಸಿದ್ದಾರೆ.

ಬಡವರಿಗೆ ಮನೆ ಕಟ್ಟಿಕೊಡುವ ಬದಲು ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗುತ್ತಿರುವ 250 ಮನೆಗಳ ಕಾಮಗಾರಿಯಲ್ಲಿ ಭಾರಿ ಹಗರಣ ನಡೆದಿದೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆ ನಿರ್ಮಾಣದ ಜವಾಬ್ದಾರಿ ಹೊತ್ತ ಕೊಳಗೇರಿ ಅಭಿವೃದ್ಧಿ ಮಂಡಳಿ ದಾವಣಗೆರೆ ವಿಭಾಗದ ಅಧಿಕಾರಿಗಳು ಮನೆ ನಿರ್ಮಾಣದ ಫಲಾನುಭವಿಗಳಿಗೆ ಮನೆ ನೀವೇ ಕಟ್ಟಿಸಿಕೊಳ್ಳಿ, ನಾವು ನಿರ್ಮಾಣಕ್ಕೆ ಬೇಕಾದ ಸಾಮಗ್ರಿಗಳನ್ನು ಕೊಡಿಸುತ್ತೇವೆ ಎಂದು ಹೇಳಿ ಕೆಲವು ಸಾಮಗ್ರಿ ನೀಡಿದ್ದಾರೆ. ಒಂದು ಮನೆಗೆ ₹2 ಲಕ್ಷ ಮಾತ್ರ ಖರ್ಚು ಮಾಡಿ, ಉಳಿದ ಹಣವನ್ನು ಫಲಾನುಭವಿಗಳಿಗೆ ನೀಡದೆ ಅನ್ಯಾಯ ಮಾಡಿದ್ದಾರೆ. ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!