September 4, 2026
Friday, September 4, 2026
spot_img

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17.64 ಲಕ್ಷ ವಂಚಿಸಿದ್ದ ಖದೀಮರ ಜಾಲ ಪತ್ತೆ, 12 ಮಂದಿ ಆರೋಪಿಗಳು ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕ್ರಿಪ್ಟೋ ಕರೆನ್ಸಿ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

17.64 ಲಕ್ಷ ಆನ್‌ಲೈನ್ ವಂಚನೆ

ಬಂಧಿತ ಆರೋಪಿಗಳು ಸಾರ್ವಜನಿಕರಿಗೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಹಾಗೂ ಕ್ರಿಪ್ಟೋ ಕರೆನ್ಸಿಗೆ ಸುಲಭವಾಗಿ ಹಣ ಬದಲಾವಣೆ ಮಾಡಿಕೊಡುವ ಆಮಿಷ ಒಡ್ಡುತ್ತಿದ್ದರು. ಇದನ್ನು ನಂಬಿದ ದೂರುದಾರರೊಬ್ಬರಿಂದ ಹಂತ ಹಂತವಾಗಿ ಒಟ್ಟು 17.64 ಲಕ್ಷ ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು, ಬಳಿಕ ಯಾವುದೇ ಕ್ರಿಪ್ಟೋ ಕರೆನ್ಸಿ ನೀಡದೆ ವಂಚಿಸಿ ಪರಾರಿಯಾಗಿದ್ದರು.

ಪೊಲೀಸರ ಭೇಟೆ: 12 ಆರೋಪಿಗಳು ಲಾಕ್

ಹಣ ಕಳೆದುಕೊಂಡ ಸಂತ್ರಸ್ತರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ತಾಂತ್ರಿಕ ಮಾಹಿತಿಗಳ ನೆರವಿನಿಂದ ತನಿಖೆ ಆರಂಭಿಸಿದ್ದರು. ವಂಚಕರ ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಕರೆಗಳ ಹಿನ್ನೆಲೆ ಆಧರಿಸಿ ಕಾರ್ಯಾಚರಣೆ ನಡೆಸಿದ ಸೈಬರ್ ಪೊಲೀಸ್ ತಂಡ, ವಿಭಿನ್ನ ಕಡೆಗಳಲ್ಲಿ ಅಡಗಿದ್ದ 12 ಮಂದಿ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.

ಇದನ್ನೂ ಓದಿ;

ಮೊಬೈಲ್, ಬ್ಯಾಂಕ್ ದಾಖಲೆಗಳು ಜಪ್ತಿ

ಬಂಧಿತ ಆರೋಪಿಗಳಿಂದ ವಂಚನೆಗೆ ಬಳಸುತ್ತಿದ್ದ ಹಲವು ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ವಿವಿಧ ಬ್ಯಾಂಕ್‌ಗಳ ಪಾಸ್‌ಬುಕ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಇದೇ ರೀತಿ ಇನ್ನು ಎಷ್ಟು ಜನರಿಗೆ ವಂಚಿಸಿದ್ದಾರೆ ಮತ್ತು ಇವರ ಹಿಂದೆ ಬೇರೆ ಯಾವುದಾದರೂ ಅಂತಾರಾಷ್ಟ್ರೀಯ ಸೈಬರ್ ಗ್ಯಾಂಗ್ ಇದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ಸದ್ಯ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !