Sunday, September 25, 2022

Latest Posts

‘ಸ್ಕ್ಯಾಮ್ ರಾಮಯ್ಯ’ ಕೈಪಿಡಿ ಬಿಡುಗಡೆಗೊಳಿಸಿದ ಬಿಜೆಪಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಪೇಸಿಎಂ ಎಂಬ ಬಾರ್ ಕೋಡ್ ಮಾದರಿ ಪ್ರಚಾರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬೆನ್ನಲ್ಲೇ, ರಾಜ್ಯ ಬಿಜೆಪಿ ಗುರುವಾರ ಸ್ಕ್ಯಾಮ್ ರಾಮಯ್ಯ ಎಂಬ ಕಿರು ಹೊತ್ತಗೆಯನ್ನು ಬಿಡುಗಡೆ ಮಾಡಿದೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಕೇಳಿಬಂದ ಎಲ್ಲ ಹಗರಣಗಳ ಆರೋಪಗಳ ಮಾಹಿತಿಯನ್ನು ಪುಸ್ತಕ ಒಳಗೊಂಡಿದೆ.
ಅರ್ಕಾವತಿ ರೀಡೂ, ಹ್ಯುಬ್ಲೋಟ್ ವಾಚ್ ಪ್ರಸಂಗ, ಮರಳು ದಂಧೆ ಆರೋಪ, ಹಾಸಿಗೆ-ದಿಂಬು ಹಗರಣ… ಹೀಗೆ ಹಲವನ್ನು ಪುಸ್ತಕದಲ್ಲಿ ಪಟ್ಟಿ ಮಾಡಲಾಗಿದ್ದು, ಈ ಸಂಬಂಧ ಆಯಾ ಸಂದರ್ಭಗಳಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಗಳನ್ನು ಬಳಸಿಕೊಳ್ಳಲಾಗಿದೆ.
ಬಿಜೆಪಿ ಮುಖ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಕ್ಯಾಮ್ ರಾಮಯ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ವಕ್ತಾರ ಎಂ ಜಿ ಮಹೇಶ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!