ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಕೈ ಹಾಕಿದ ಕಡೆಯಲ್ಲೆಲ್ಲ ಹಗರಣ, 2 ವರ್ಷಗಳಲ್ಲಿ 10 ಹಗರಣ ಆಚೆ ಬಂದಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರ ಕರ್ನಾಟಕದ ಗೌರವವನ್ನು ಕಡಿಮೆ ಮಾಡಿದೆ. ಇದನ್ನು ಬಹಳ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಕಾಂಗ್ರೆಸ್ನ ಅಧಿಕಾರದ ಲಾಲಸ್ಯ ನೈತಿಕತೆಯನ್ನು ಅಧೋಗತಿಗೆ ತೆಗೆದುಕೊಂಡಿದೆ. ಒಂದು ಹಗರಣದಿಂದ ಮತ್ತೊಂದು ಹಗರಣ ಆಗುತ್ತಿದೆ ಎಂದು ಹೇಳಿದ್ದಾರೆ.
ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ. ಸರ್ಕಾರ ಆರ್ಥಿಕವಾಗಿ, ನೈತಿಕವಾಗಿ ದಿವಾಳಿಯಾಗಿದೆ. ಕ್ಯಾಬಿನೆಟ್ ಸಚಿವರು ಹನಿಟ್ರ್ಯಾಪ್ ಆಗುತ್ತಿದೆ ಎಂದು ಹೇಳುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.