September 28, 2026
Monday, September 28, 2026
spot_img

ಇಂದೇ ಮುಗಿಯಲಿದೆ ಸ್ಕ್ಯಾನಿಂಗ್ ಸಂಕಷ್ಟ: ರೋಗಿಗಳ ಹಿತ ಕಾಯಲು ರಾಜ್ಯ ಸರ್ಕಾರ ಬದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನಿಂಗ್ ಸೇವೆ ಸ್ಥಗಿತಗೊಂಡಿದೆ ಎಂಬ ಸುದ್ದಿಯನ್ನು ಸಚಿವ ದಿನೇಶ್ ಗುಂಡೂರಾವ್ ತಳ್ಳಿಹಾಕಿದ್ದಾರೆ. ಇದು ಕೇವಲ 13 ಆಸ್ಪತ್ರೆಗಳಿಗೆ ಸೀಮಿತವಾಗಿದ್ದು, ಈಗಾಗಲೇ ಅಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸೇವೆ ಒದಗಿಸುವ ಖಾಸಗಿ ಕಂಪನಿಯು 140 ಕೋಟಿ ರೂಪಾಯಿ ಪಾವತಿಸುವಂತೆ ಒತ್ತಾಯಿಸುತ್ತಿದೆ. ಆದರೆ ಸರ್ಕಾರದ ಲೆಕ್ಕಾಚಾರದ ಪ್ರಕಾರ ಕೇವಲ 10 ರಿಂದ 15 ಕೋಟಿ ರೂಪಾಯಿ ಮಾತ್ರ ಬಾಕಿ ಇದೆ. “ಕಂಪನಿ ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ, ಕೇವಲ ನ್ಯಾಯಯುತ ಹಣವನ್ನಷ್ಟೇ ನೀಡುತ್ತೇವೆ” ಎಂದು ಸಚಿವರು ಖಡಕ್ ಆಗಿ ಉತ್ತರಿಸಿದ್ದಾರೆ.

Must Read