ಹೊಸದಿಗಂತ ಹಾಸನ :
ಕೆಲಸ ಮಾಡುವ ವೇಳೆ ಕಾರ್ಮಿಕನಿಗೆ ಕಾಡುಕೋಣ ದಾಳಿ ನಡೆಸಿ ಎದೆಗೆ ತಿವಿದು ಗಂಭೀರ ಗಾಯಗೊಳಿಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಕ್ಯಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ (50) ಕಾಡುಕೋಣ ದಾಳಿಯಿಂದ ಗಾಯಗೊಂಡ ಕಾರ್ಮಿಕ. ಲೋಕೇಶ್ ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ. ಎದೆ ಭಾಗದಲ್ಲಿ ತಿವಿದಿರುವ ಕಾಣುಕೋಣ ಕಾರ್ಮಿಕ ಲೇಕೇಶ್‌ಗೆ ಗಂಭೀರ ಗಾಯವಾಗಿದೆ. ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿರುವ ಕಾರ್ಮಿಕ ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು ಗಾಯಾಳುವಿನ ಆರೋಗ್ಯ ವಿಚಾರಸಿದ್ದಾರೆ.