ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿಗೆ SCSP-TSP ಹಣ ಬಳಕೆ ಮಾಡ್ತಿರೋ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಜೆಡಿಎಸ್ ಆಕ್ರೋಶ ಹೊರ ಹಾಕಿದೆ.
ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಲೇ ಬಂದಿರುವ ಕಾಂಗ್ರೆಸ್ ಮತ್ತೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ಮಜಾವಾದಿ ಸಿದ್ದರಾಮಯ್ಯ ಅಹಿಂದ ಸಮುದಾಯಕ್ಕೆ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು. ದಲಿತ ವಿರೋಧಿ ಸಿದ್ದರಾಮಯ್ಯ 2025-26ನೇ ಸಾಲಿನಲ್ಲಿ SCSP/TSP ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದ 42,017.51 ಕೋಟಿ ರೂ.ನಲ್ಲಿ 11,896.84 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಹಂಚಿಕೆ ಮಾಡಿಕೊಳ್ಳುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ಸಾವಿರಾರು ಕೋಟಿ ರೂ. ಹಣವನ್ನ ಅವೈಜ್ಞಾನಿಕ ಗ್ಯಾರಂಟಿಗಳಿಗೆ ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ದಲಿತರಿಗೆ ದ್ರೋಹ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.