ಜಾತ್ರೆಗೆ ಬಂದಿದ್ದಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರಿಂದ ಹಲ್ಲೆ: 73 ಜನರ ಮೇಲೆ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಭಾನುವಾರ (ನ.3) ಹನುಮಾನ ದೇವರ ಜಾತ್ರಾ ಮಹೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದವರ ಜೊತೆಗೆ ಪರಿಶಿಷ್ಟ ಜನಾಂಗದವರು ಸೋಮವಾರ (ನ.4) ಖಟಕಚಿಂಚೋಳಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದರ ಬೆನ್ನಲ್ಲೇ ಲಿಂಗಾಯತ ಸಮುದಾಯದ 73 ಜನರ ವಿರುದ್ಧ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಪೈಕಿ 15 ಜನರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನವೆಂಬರ್ 3 ರಂದು ಸಂಜೆ 7.45ಕ್ಕೆ ಚಳಕಾಪುರ ಗ್ರಾಮದಲ್ಲಿ ಸವರ್ಣೀಯರು ದಲಿತರ ಕಾಲೋನಿಗಳಿಗೆ ನುಗ್ಗಿದ್ದು, ಈ ವೇಳೆ ಜಾತಿ ನಿಂದನೆ ಮಾಡಿ, ಮಹಿಳೆಯರು, ಮಕ್ಕಳು ಹಾಗೂ ವೃದ್ಧರನ್ನು ಮನಬಂದಂತೆ ಥಳಿಸಿದರು ಎಂದು ಧನರಾಜ್ ದೊಡ್ಡಮನಿ ಎಂಬುವವರು ದೂರಿನಲ್ಲಿ ಆರೋಪಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!