Wednesday, February 8, 2023

Latest Posts

ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ: ಡಾ.ಜಿ. ಪರಮೇಶ್ವರ

ಹೊಸ ದಿಗಂತ ವರದಿ, ಶಿವಮೊಗ್ಗ:

ಚಿತ್ರದುರ್ಗದಲ್ಲಿ ಜನವರಿ 8ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಮುಖಂಡರು ಆಗಮಿಸಲಿದ್ದಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಕರೆತರುವ ಪ್ರಯತ್ನ ಕೂಡ ನಡೆದಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರಿಗಾದ ಅನ್ಯಾಯವನ್ನು ಈ ಸಮಾವೇಶದ ಮೂಲಕ ಜನರಿಗೆ ತಿಳಿಸಲಾಗುವುದು ಎಂದರು.
ಕಳೆದ ಮೂರು ವರ್ಷಗಳ ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆಗಳನ್ನು ಕಡೆಗಣಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಹಾಗೆಯೇ ಸರ್ಕಾರ ಅವರಿಗೆ ಮೀಸಲಿಟ್ಟ ಯೋಜನೆಗಳ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಲಾಗಿದೆ ಎಂದು ಆರೋಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!