ಹೊಸದಿಗಂತ ವರದಿ ಹೊನ್ನಾವರ:
ಜಾನಪದ ವಿದ್ವಾಂಸ ಹಾಗೂ ಹಿರಿಯ ಸಾಹಿತಿ ಎನ್.ಆರ್.ನಾಯಕ(೯೦) ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಮೃತರಿಗೆ ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ. ಮೂಲತಃ ಅಂಕೋಲಾ ತಾಲ್ಲೂಕಿನ ಭಾವಿಕೇರಿಯವರಾದ ಎನ್.ಆರ್.ನಾಯಕ, ಕಥೆ, ಸಂಶೋಧನಾ ಪ್ರಬಂಧ, ಜಾನಪದ ಸಂಪಾದನೆ ಹೀಗೆ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿರುವ ಇವರು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.