ಎಂಬಿಬಿಸ್‌ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಸ್ಕ್ಯಾಮ್‌: `ಕೈ’ ಮುಖಂಡನ ಮನೆ ಮೇಲೆ ಇಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎಂಆರ್‌ಎಂಸಿ ಮೆಡಿಕಲ್ ಕಾಲೇಜಿನ ಶಿಷ್ಯವೇತನ ಹಗರಣದ ಸಂಬಂಧ ಕಾಂಗ್ರೆಸ್  ಮುಖಂಡ ಹೆಚ್‍ಕೆಇ ಸೊಸೈಟಿ ಮಾಜಿ ಅಧ್ಯಕ್ಷನ ಮನೆ ಮೇಲೆ ಇಡಿ ದಾಳಿ ನಡೆಸಿದೆ.

ಕಲಬುರಗಿಯ  ರಿಂಗ್ ರಸ್ತೆಯಲ್ಲಿರುವ ಭೀಮಾಶಂಕರ್ ಬಿಲಗುಂದಿಯವರ ಮನೆ ಮೇಲೆ ನಾಲ್ವರು ಅಧಿಕಾರಿಗಳ ತಂಡ ದಾಳಿ ಮಾಡಿದೆ. ಎಂಆರ್‌ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯವೇತನ ಹಗರಣ ವಿಚಾರವಾಗಿ ಈ ದಾಳಿ ನಡೆದಿದೆ.

2018 ರಿಂದ 2024ರ ವರೆಗೆ ಎರಡು ಅವಧಿಗೆ ಭೀಮಾಶಂಕರ್ ಅಧ್ಯಕ್ಷರಾಗಿದ್ದರು. 700 ಜನ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 80 ಕೋಟಿ ರೂ.ಗೂ ಅಧಿಕ ಹಣ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!