Saturday, January 3, 2026

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಶಾಲಾ ಬಸ್: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ಖಮ್ಮಂ ಜಿಲ್ಲೆಯ ಪೆನುಬಳ್ಳಿ ಮಂಡಲದ ಗಣೇಶಪಾಡು ಸಮೀಪ ಶುಕ್ರವಾರ ಸಂಜೆ ಭಾರೀ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿದೆ. ಬಸ್ಸಿನಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ.

ವೆಮ್ಸೂರ್ ಮಂಡಲದ ಮದ್ದುಲಗುಡೆಮ್‌ನಲ್ಲಿರುವ ವಿವೇಕಾನಂದ ವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೊರಟಿದ್ದ ಈ ಬಸ್, ಶಾಲೆ ಮುಗಿದ ಬಳಿಕ ಗಣೇಶಪಾಡು, ಎಲ್.ಎಸ್. ಬಂಜಾರ್, ಕೆ.ಎಂ. ಬಂಜಾರ್, ಮರ್ಲಕುಂಟ ಹಾಗೂ ಮುತ್ತುಗುಡೆಮ್ ಗ್ರಾಮಗಳತ್ತ ತೆರಳುತ್ತಿತ್ತು. ಗಣೇಶಪಾಡು ಗ್ರಾಮದ ಹೊರವಲಯದ ಬಳಿ ಬಸ್ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಸ್ ಅತಿವೇಗದಲ್ಲಿ ಚಲಿಸುತ್ತಿದ್ದು, ಇದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ:

ಈ ದುರ್ಘಟನೆಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳ ಪೋಷಕರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಪೆನುಬಳ್ಳಿ ಮತ್ತು ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ತಿರುವೂರ್‌ನ ಖಾಸಗಿ ಆಸ್ಪತ್ರೆಗಳಿಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.

error: Content is protected !!