September 2, 2026
Wednesday, September 2, 2026
spot_img

ಮಣಿಪಾಲ್‌ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್‌: ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದ್ದು, ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಮಣಿಪಾಲದಲ್ಲಿರುವ ಖಾಸಗಿ ಶಾಲೆಗೆ ಸೇರಿದ ಬಸ್‌ನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಇದ್ದಕ್ಕಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲೇ ಇದ್ದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಒಬ್ಬ ವಿದ್ಯಾರ್ಥಿಗೆ ಮಾತ್ರ ತಲೆಗೆ ತೀವ್ರ ಪೆಟ್ಟಾಗಿದೆ. ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಬಸ್‌ ಹತ್ತಲು ಕಾಯುತ್ತಾ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಅಪಘಾತದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ‌ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !