ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ನೋನಿ ಜಿಲ್ಲೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಇಂಫಾಲದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆಯ ಲಾಂಗ್ಸೈ ಪ್ರದೇಶದ ಬಳಿಯ ಓಲ್ಡ್ ಕ್ಯಾಚರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತಂಬಲ್ನು ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳು ಬಸ್ನಲ್ಲಿ ವಾರ್ಷಿಕ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.