ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಬಾರಂಕಿ ಸಮೀಪದ ಸಲಾರ್‌ಪುರ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ 32 ಮಕ್ಕಳು ಗಾಯಗೊಂಡಿದ್ದಾರೆ.
ಸೂರತ್‌ಗಂಜ್‌ನ ಹರಕ್ಕ ಸಂಯುಕ್ತ ಶಾಲೆಯ ಮಕ್ಕಳು ಬಸ್‌ನಲ್ಲಿ ಲಖನೌಗೆ ಪಿಕ್‌ನಿಕ್‌ಗೆ ಹೋಗುವ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರನೊಬ್ಬನನ್ನು ರಕ್ಷಿಸಲು ಚಾಲಕ ಪ್ರಯತ್ನಿಸಿದ ವೇಳೆ, ಬಸ್ ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಬಸ್ ನಿರ್ವಾಹಕ ಹಾಗೂ 12-13 ವರ್ಷ ವಯಸ್ಸಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.