Monday, March 4, 2024

ಶಾಲಾ ಬಸ್ – ಟ್ರ್ಯಾಕ್ಟರ್ ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳ ಸಾವು

ಹೊಸದಿಗಂತ ವರದಿ ಬಾಗಲಕೋಟೆ:

ತಾಲೂಕಿನ ಆಲಗೂರ ಗ್ರಾಮದ ವರ್ಧಮಾನ ನ್ಯಾಮಗೌಡ ಖಾಸಗಿ ಶಾಲೆಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ವಾರ್ಷಿಕ ಸ್ನೇಹ ಸಮ್ಮೇಳನ ಮುಗಿಸಿಕೊಂಡು ಶಾಲಾ ವಾಹನದಲ್ಲಿ ಮನೆಗೆ ಹೋಗುವಾಗ ಈ ಘಟನೆ ಸಂಭವಿಸಿದೆ.

ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ರಸ್ತೆಯ ಮೇಲೆ ನಿಲ್ಲಿಸಿದ ಕಬ್ಬಿನ ಟ್ರ್ಯಾಕ್ಟರ್ ಗೆ ಹಾಯಿಸಿದ ಪರಿಣಾಮ ನಾಲ್ಕು ವಿದ್ಯಾರ್ಥಿಗಳು ಸಾವನಪ್ಪಿದ್ದು ಎರಡು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 28 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಕೆಲ ವಿದ್ಯಾರ್ಥಿಗಳನ್ನು ಪಾಲಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ತಾಲ್ಲೂಕಿನ ಕವಟಗಿ ಗ್ರಾಮದ ವಿದ್ಯಾರ್ಥಿ ಗೋವಿಂದ ಸದಾಶಿವ ಜಂಬಗಿ(13), ಶ್ವೇತಾ ಶಿವನಗೌಡ ಪಾಟೀಲ(12), ಬಸವರಾಜ ಕೊಟ್ಟಗಿ(17), ಸಾಗರ ಗುರಲಿಂಗ ಕಡಕೋಳ(16) ಸಾವನಪ್ಪಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ, ಸರ್ಕಾರಿ ಆಸ್ಪತ್ರೆಗೆ ಹಾಗೂ ಘಟನಾ ಸ್ಥಳಕ್ಕೆ ತಡ ರಾತ್ರಿಗೆ ಜಿಲ್ಲಾ ಎಸ್.ಪಿ. ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸರಕಾರಿ ಉಪವಿಭಾಗ ಆಸ್ಪತ್ರೆಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ. ಕುಟುಂಬಸ್ಥರಿಗೆ ಸ್ವಾಂತಾನ ಹೇಳಿದ್ದರು. ಶಾಸಕ ಜಗದೀಶ ಗುಡಗುಂಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಾಂತಾನ ಹೇಳಿದರು‌.

ಶಾಸಕ ಸಿದ್ದು ಸವದಿ.ಜಿಲ್ಲಾಧಿಕಾರಿ ಎಸ್.ಜಾನಕಿ. ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕೋರೆರೆ. ಎಸಿ.ಸಂತೋಷ ಕಾಮಗೊಂಡ.ಡಿ.ಎಸ್.ಪಿ.ಶಾಂತವೀರ ಈ.ತಹಶೀಲ್ದಾರ ಸದಾಶಿವ ಮಕ್ಕೋಜಿ. ಬಿಇಒ ಅಶೋಕ ಬಸನ್ನವರ. ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಅಸ್ಟಗಿ.ಸಿಪಿಐ ಮಲ್ಲಪ್ಪ ಮಡ್ಡಿ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!