ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಮಕ್ಕಳಿದ್ದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬೆಳಗಾವಿ ಶಾಲಾ ಮಕ್ಕಳು ಬಸ್ ಮೂಲಕ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಟ್ರಿಪ್ ಮುಗಿಸಿ ವಾಪಸ್ ಬರುವಾಗ ಮೈಸೂರಿನ ಫೌಂಟೇನ್ ಸರ್ಕಲ್ ಬಳಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿನಲ್ಲಿ ಒಟ್ಟು 30 ಮಕ್ಕಳಿದ್ದರು ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಶಾಂತಿನಿಕೇತನ ಶಾಲೆಯ ಮಕ್ಕಳು ಶಿಕ್ಷಕರೊಂದಿಗೆ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.