ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜುಲೈ ೭ರಂದು ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ,ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರಕಾರಿ, ಅನುದಾನಿತ, ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.