ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದಿನಿಂದ 6,7,8 ನೇ ತರಗತಿಗಳು ಪ್ರಾರಂಭವಾಗಲಿದೆ.
ಕೋವಿಡ್ ನಿಯಮ ಅನುಸರಿಸಿ ಶಾಲೆ ಆರಂಭಿಸಲಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ತರಗತಿ ನಡೆಯಲಿವೆ. ಶನಿವಾರ ಮತ್ತು ಭಾನುವಾರ ಶಾಲೆಗೆ ರಜೆ ಇರಲಿದೆ.
ಈಗಾಗಲೇ 9 ರಿಂದ 12 ನೇ ತರಗತಿವರೆಗೆ ಶಾಲಾ ಕಾಲೇಜು ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈಗಾಗಲೇ ಶಾಲೆ ಆರಂಭಕ್ಕೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಶಾಲೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ನೀಡಲಾಗುತ್ತದೆ. ಜೊತೆಗೆ ಬಿಸಿನೀರಿನ ಘಟಕ ಇಡಲಾಗಿದೆ. ಇದೀಗ 6-12 ನೇ ತರಗತಿವರೆಗೆ ಎಲ್ಲ ತರಗತಿಗಳು ಆರಂಭವಾದಂತಾಗಿದೆ. ಇನ್ನು 1-5 ನೇ ತರಗತಿವರೆಗಿನ ಮಕ್ಕಳಿಗೆ ಶಾಲೆ ತೆರೆಯುವ ಬಗ್ಗೆ ಆಲೋಚಿಸಲಾಗುತ್ತಿದೆ. ಕೊರೋನಾ ಭೀತಿ ಇನ್ನೂ ತಗ್ಗದ ಕಾರಣ ಜೊತೆಗೆ ಸಾಲು ಸಾಲು ಹಬ್ಬಗಳು ಇರುವುದರಿಂದ1-5 ನೇ ತರಗತಿ ಶಾಲೆ ಸದ್ಯಕ್ಕಿಲ್ಲ ಎನ್ನಲಾಗಿದೆ. ಅವರಿಗೆ ಎಂದಿನಂತೆ ಆನ್ಲೈನ್ ತರಗತಿ ನಡೆಯುತ್ತಿದೆ.