ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಜಲಾಶಯಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 11ರಂದು) ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ತಿಳಿಸಿದ್ದಾರೆ. ಆದರೆ ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!