ದಿಗಂತ ವರದಿ ಕುಶಾಲನಗರ:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶಾಲೆಯ ಮುಂಭಾಗದ ಎರಡೂ ಕೊಠಡಿಗಳ ಬೀಗವನ್ನು ಮುರಿದ ಕಳ್ಳರು, ವಿದ್ಯಾರ್ಥಿಗಳ ಅಕ್ಷರ ದಾಸೋಹದ ಅಕ್ಕಿ ಮತ್ತು ಹಾಲಿನ ಪೊಟ್ಟಣಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.