ಹಿಜಾಬ್​ಗೆ ಆಕ್ಷೇಪ ಆರೋಪ: ಪ್ರಾಂಶುಪಾಲರು, ಮೂವರು ಶಿಕ್ಷಕರ ವಿರುದ್ಧ ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಲೆಗೆ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ದೂರು ದಾಖಲಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಹಯಾತ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿನಿ ಮತ್ತು ಅದೇ ತರಗತಿಯಲ್ಲಿ ಓದುತ್ತಿರುವ ಮತ್ತೊಬ್ಬ ಬಾಲಕಿ ಹಿಜಾಬ್ ಧರಿಸಿ ಜೂನ್ 22ರಂದು ಶಾಲೆಗೆ ಬಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಂಶುಪಾಲರು ಮತ್ತು ಶಿಕ್ಷಕರು ಆರಂಭದಲ್ಲಿ ಶಾಲೆಯಲ್ಲಿ ಸ್ಕಾರ್ಫ್ ಧರಿಸುವಂತಿಲ್ಲ ಎಂದಿದ್ದರು. ನಂತರ ತರಗತಿಯೊಳಗೆ ತಲೆಗೆ ಸ್ಕಾರ್ಫ್ ಹಾಕುವಂತಿಲ್ಲ, ಶಾಲೆಯ ಆವರಣದಲ್ಲಿ ಮಾತ್ರ ಹಾಕಬಹುದು ಎಂದು ಹೇಳಿ ಇಬ್ಬರಿಗೂ ಸೂಚನೆ ನೀಡಿದ್ದರು.

ಈದಾದ ಬಳಿಕ ವಿದ್ಯಾರ್ಥಿನಿಯರು ಜೂನ್ 23ರಂದು ಮತ್ತೆ ಹಿಜಾಬ್​ ಧರಿಸಿ ಬಂದಿದ್ದರು. ಈ ವೇಳೆ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರ ನಡುವೆ ವಾಗ್ವಾದ ನಡೆದಿದೆ. ವಿದ್ಯಾರ್ಥಿನಿಯರು ಈ ಕುರಿತು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ನಂತರ ಪೋಷಕರ ಸಲಹೆಯ ಮೇರೆಗೆ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದು, ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!