ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಆಟದ ಮೈದಾನದಲ್ಲಿ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.