ಎರಡು ದಿನದಲ್ಲಿ ಶಾಲೆ ಶುರು, ಕೋವಿಡ್‌ ಮಾರ್ಗಸೂಚಿ ಇದೆಯಾ? ಸಚಿವರು ಹೇಳಿದ್ದೇನು??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಕೊಟ್ಟರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!