Saturday, August 13, 2022

Latest Posts

ಶಾಲಾ ವಾಹನ- ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ವಿಜಯಪುರ:

ಖಾಸಗಿ ಶಾಲಾ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಮುದ್ದೇಬಿಹಾಳ ತಾಲೂಕಿನ ಜೈನಾಪುರ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚವನಬಾವಿ ಗ್ರಾಮದ ಶಿವಪ್ಪ ಹಣಮಪ್ಪ ಪೂಜಾರಿ (30) , ಸಂಗಪ್ಪ ಬಸಪ್ಪ ಪೂಜಾರಿ (40) ಎಂದು ಗುರುತಿಸಲಾಗಿದೆ.
ಬೈಕ್ ಸವಾರರು ಚವನಬಾವಿಯಿಂದ ನಾಲತವಾಡದ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಿಪಿಐ ಆನಂದ ವಾಘಮೋಡೆ, ಪಿಎಸ್ ಐ ರೇಣುಕಾ ಜಕನೂರ ಭೇಟಿ ನೀಡಿ, ಪರಿಶೀಲಿಸಿದ್ದಾರೆ.ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರಿಂದ ಸಾಂತ್ವನ, ವೈಯಕ್ತಿಕ ನೆರವು: ಅಪಘಾತದಲ್ಲಿ ಮೃತಪಟ್ಟ ಸಂಗಪ್ಪ ಪೂಜಾರಿ ಹಾಗೂ ಶಿವಪ್ಪ ಪೂಜಾರಿ ಕುಟುಂಬದವರನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಭೇಟಿಯಾದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ ಎರಡೂ ಕುಟುಂಬಕ್ಕೆ ತಲಾ 50 ಸಾವಿರ ರೂ.ವೈಯಕ್ತಿಕ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss