ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ನಾನಕ್ಕೆ ನೀರು ಕಾಯಿಸಲು ಹಾಕಿದ್ದ ವಿದ್ಯುತ್ ಹೀಟರ್ ಸ್ಪರ್ಶಿಸಿ 9ನೇ ತರಗತಿ ವಿದ್ಯಾರ್ಥಿನಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಡೆದಿದೆ.
ಪ್ರತಿದಿನದಂತೆ ಇಂದು ಬೆಳಿಗ್ಗೆ ಶಾಲೆಗೆ ತೆರಳುವ ಸಲುವಾಗಿ ವಿದ್ಯಾರ್ಥಿ ಭಾಗ್ಯಶ್ರೀ ನೀರು ಕಾಯಿಸಲು ವಾಟರ್ ಹೀಟರ್ ಹಾಕಿದ್ದಳು.
ನೀರು ಕಾದ ನಂತರ ಸ್ನಾನ ಮಾಡಿ, ಹೀಟರ್‌ನ ಸ್ವಿಚ್ ಆಫ್ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿದೆ. ಶಾಕ್ ಹೊಡೆದ ರಭಸಕ್ಕೆ ಭಾಗ್ಯಶ್ರೀ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಕುಟುಂಬ ಸದಸ್ಯರು ಆಕೆಯನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದರೂ, ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.
ಮಗಳನ್ನು ಕಳೆದುಕೊಂಡು ಕುಟುಂಬ ಅಪಾರ ದುಃಖದಲ್ಲಿದೆ.
ಸ್ನಾನಕ್ಕೆಂದು ಇಟ್ಟಿದ್ದ ಹೀಟರ್ ಮುಟ್ಟಿ ಶಾಲಾ ಬಾಲಕಿ ದಾರುಣ ಸಾವು
