ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿ ನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕುಗಳ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳು ಎನ್‌ಆರ್ ಪುರ, ಮೂಡಿಗೆರೆ, ಶೃಂಗೇರಿ, ಕಳಸ, ಕೊಪ್ಪ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಾಧಿಕಾರದಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಶನಿವಾರದಿಂದ ಕರಾವಳಿ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಕರ್ನಾಟಕಕ್ಕೆ ಶನಿವಾರ ಸಂಜೆ ಆರೆಂಜ್ ಅಲರ್ಟ್ ನೀಡಿದ್ದು, ಈ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.