ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ಮಂಜು ಮತ್ತು ಶೀತಗಾಳಿ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರದ ಜಿಲ್ಲಾಡಳಿತವು ಭಾನುವಾರ ಮಹತ್ವದ ಘೋಷಣೆ ಹೊರಡಿಸಿದೆ. ಜಿಲ್ಲೆಯ ಎಲ್ಲಾ ಪಠ್ಯಕ್ರಮಗಳು ನರ್ಸರಿಯಿಂದ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಜನವರಿ 15ರವರೆಗೆ ರಜೆ ಘೋಷಿಸಲಾಗಿದೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಉತ್ತರ ಪ್ರದೇಶದ ಎಲ್ಲಾ ಶಾಲೆಗಳನ್ನು ಜನವರಿ 5 ರವರೆಗೆ ರಜೆ ಘೋಷಿಸಲಾಗಿತ್ತು. ಭಾರತೀಯ ಹವಾಮಾನ ಇಲಾಖೆಯ ರಾಜ್ಯದ 40 ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿಯ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

