Monday, August 8, 2022

Latest Posts

ಒಂದು ವರ್ಷದ ಬಳಿಕ ಕಾಶ್ಮೀರದಲ್ಲಿ ಶಾಲೆಗಳು ಪುನರಾರಂಭ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕಾಶ್ಮೀರದಲ್ಲಿ ಸೋಮವಾರ ಶಾಲೆಗಳು ಪುನರಾರಂಭಗೊಂಡವು.
ಒಂದು ವರ್ಷದ ಬಳಿಕ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಇದೇ ಮೊದಲ ಬಾರಿಗೆ ತರಗತಿಗಳಿಗೆ ಹಾಜರಾದರು. ಪೋಷಕರಿಂದ ಸಮ್ಮತಿ ಪತ್ರ ಪಡೆದಿರುವ ವಿದ್ಯಾರ್ಥಿಗಳಿಗಷ್ಟೇ ಹಾಜರಾಗಲು ಅವಕಾಶ ನೀಡಲಾಗಿತ್ತು.
ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಆಕ್ಷೇಪಣೆಯಿಲ್ಲ ಪ‍ತ್ರ ಪಡೆದುಕೊಂಡಿದ್ದವು. ಕೋವಿಡ್‌ ಪರಿಣಾಮ ಯಾವುದೇ ಅಹಿತಕರ ಬೆಳವಣಿಗೆ ಸಂಭವಿಸಿದಲ್ಲಿ ಬರಬಹುದಾದ ಆಕ್ಷೇಪಗಳ ಕಾರಣದಿಂದ ಈ ಕ್ರಮ ವಹಿಸಲಾಗಿತ್ತು. ಸರ್ಕಾರದ ಆದೇಶದಂತೆ 6 ರಿಂದ 8ನೇ ತರಗತಿಗಳು ಮಾರ್ಚ್ 8ರಿಂದ, ಉಳಿದ ತರಗತಿಗಳು ಮಾರ್ಚ್ 18ರಿಂದ ಆರಂಭವಾಗಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss