ಏಪ್ರಿಲ್ 1 ರಿಂದ ದೆಹಲಿಯಲ್ಲಿ ಶಾಲೆಗಳು ಶುರು: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಹೀಗಾಗಿ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ಏಪ್ರಿಲ್ 1 ರಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಎಲ್ಲಾ ವಿದ್ಯಾರ್ಥಿಗಳಿಗೆಆಫ್ ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಿದೆ.
ದೆಹಲಿ ಸರ್ಕಾರವು ಡಿಸೆಂಬರ್ 28, 2021 ರಂದು ಮುಂದಿನ ಆದೇಶದವರೆಗೆ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿತ್ತು.
ಜನವರಿ 27, 2022 ರಂದು ನಡೆದ ಕೋವಿಡ್ ಪರಿಶೀಲನಾ ಸಭೆಯಲ್ಲಿ, ಈ ಹಿಂದೆ ವಿಧಿಸಲಾಗಿದ್ದ ಕೆಲವು COVID-19 ನಿರ್ಬಂಧಗಳನ್ನು ಸಡಿಲಿಸಲು DDMA ನಿರ್ಧರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!