ಆಯುರ್ವೇದದಲ್ಲಿ ವೈಜ್ಞಾನಿಕ ಸಂಶೋಧನೆ- ಆಯುಷ್ ನಿಂದ ‘ಸ್ಮಾರ್ಟ್’ ಯೋಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತದ ಪ್ರಾಚೀನ ವೈದ್ಯಕೀಯ ಪದ್ಧತಿಯಾದ ಆಯುರ್ವೇದವು ಇಂದು ಪ್ರಪಂಚದಾದ್ಯಂತ ಮನ್ನಣೆ ಗಳಿಸುತ್ತಿದೆ. ಆಯುರ್ವೇದದ ಮಹತ್ವವನ್ನು ಜಗತ್ತಿಗೆ ಮನವರಿಕೆ ಮಾಡಿಕೊಡಲು ಭಾರತ ಸರ್ಕಾರವು ಕಾರ್ಯನಿರತವಾಗಿದೆ. ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ನಿರ್ಧಾರವನ್ನು ಕೇಂದ್ರ ಆಯುಷ್‌ ಇಲಾಖೆ ಕೈಗೊಂಡಿದ್ದು ಆಯುರ್ವೇದದಲ್ಲಿ ವೈಜ್ಞಾನಿಕ ಸಂಶೋಧನೆಯನ್ನು ಉತ್ತೇಜಿಸಲು ಸ್ಮಾರ್ಟ್‌ (SMART) ಎಂಬ ಯೋಜನೆಯೊಂದನ್ನು ಹಾಕಿಕೊಂಡಿದೆ.

SMART(Scope for Mainstreaming Ayurveda Research in Teaching Professionals) ಬೋಧನಾ ವೃತ್ತಿಪರರಲ್ಲಿ ಮುಖ್ಯವಾಹಿನಿಯ ಆಯುರ್ವೇದ ಸಂಶೋಧನೆಗೆ ಉತ್ತೇಜನ ಎಂದು ಇದನ್ನು ಅರ್ಥೈಸಬಹುದಾಗಿದೆ. ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ (NCISM) ಮತ್ತು ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ಸಂಸ್ಥೆಗಳು ಈ ಉಪಕ್ರಮವನ್ನು ಪ್ರಾರಂಭಿಸಿವೆ. ಇದರ ಅಡಿಯಲ್ಲಿ ಆಯುರ್ವೇದ ಕಾಲೇಜುಗಳು ಮತ್ತು ಆಸ್ಪತ್ರೆಗಳ ಮೂಲಕ ಆದ್ಯತೆಯ ಆರೋಗ್ಯ ಸಂಶೋಧನಾ ಕ್ಷೇತ್ರಗಳಲ್ಲಿ ವೈಜ್ಞಾನಿಕ ಸಂಶೋಧನೆಯನ್ನು ಉತ್ತೇಜಿಸುವ ಗುರಿ ಹಾಕಿಕೊಳ್ಳಲಾಗಿದೆ. ಇದು ಆಯುರ್ವೇದದಲ್ಲಿ ಕ್ಲಿನಿಕಲ್ ಸಂಶೋಧನೆಯನ್ನು ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು NCISM ನ ಅಧ್ಯಕ್ಷ ವೈದ್ಯ ಜಯಂತ್ ದೇವಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಅಸ್ಥಿಸಂಧಿವಾತ, ಕಬ್ಬಿಣದ ಕೊರತೆ ರಕ್ತಹೀನತೆ, ದೀರ್ಘಕಾಲದ ಬ್ರಾಂಕೈಟಿಸ್, ಡಿಸ್ಲಿಪಿಡೆಮಿಯಾ, ರುಮಟಾಯ್ಡ್, ಸಂಧಿವಾತ, ಸ್ಥೂಲಕಾಯತೆ, ಮಧುಮೇಹ ಮೆಲ್ಲಿಟಸ್, ಸೋರಿಯಾಸಿಸ್, ಸಾಮಾನ್ಯ ಆತಂಕದ ಅಸ್ವಸ್ಥತೆ, ಆಲ್ಕೊಹಾಲ್ಯುಕ್ತವಲ್ಲದ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮುಂತಾದ ಆರೋಗ್ಯ ಸಂಶೋಧನಾ ಕ್ಷೇತ್ರಗಳಲ್ಲಿ ನವೀನ ಸಂಶೋಧನಾ ಕಲ್ಪನೆಗಳನ್ನು ಗುರುತಿಸುವ, ಬೆಂಬಲಿಸುವ ಮತ್ತು ಉತ್ತೇಜಿಸುವ ಉದ್ದೇಶದಿಂದ ಪ್ರಸ್ತಾವಿತ ಉಪಕ್ರಮವನ್ನು ಪರಿಕಲ್ಪನೆ ಮಾಡಲಾಗಿದೆ. ಅರ್ಹ ಆಯುರ್ವೇದ ಶೈಕ್ಷಣಿಕ ಸಂಸ್ಥೆಗಳು ಜನವರಿ 10ರೊಳಗೆ ಸಂಶೋಧನೆಗೆ ಅರ್ಜಿಸಲ್ಲಿಸ ಬಹುದಾಗಿದೆ” ಎಂದು CCRAS ಡಿಜಿ ವೈದ್ಯ ರಬಿನಾರಾಯಣ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!