SCO ಸದಸ್ಯ ರಾಷ್ಟ್ರಗಳ ಶೃಂಗಸಭೆ: ಇಂದು ಉಜ್ಬೇಕಿಸ್ತಾನಕ್ಕೆ ಮೋದಿ, ಜಿನ್ ಪಿಂಗ್, ಪುಟಿನ್ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಜಿನ್ ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಇಂದು ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸದಸ್ಯ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದಿನಿಂದ ಉಜ್ಬೇಕಿಸ್ತಾನದ ಸಮರ್‌ಖಂಡ್‌ನಲ್ಲಿ ಸಮ್ಮೇಳನ ನಡೆಯಲಿದ್ದು, ಪ್ರಾದೇಶಿಕ ವಿಷಯಗಳ ಜೊತೆಗೆ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಚೀನಾ, ರಷ್ಯಾ ಮತ್ತು ಭಾರತದೊಂದಿಗೆ, ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ಪಾಕಿಸ್ತಾನ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ. ಎಂಟು ಪೂರ್ಣ ಸದಸ್ಯ ರಾಷ್ಟ್ರಗಳನ್ನು ಹೊಂದಿದ ಈ ಸಮ್ಮೇಳನದಲ್ಲಿ ಮೋದಿ, ಕ್ಸಿ ಜಿನ್‌ಪಿಂಗ್ ಮತ್ತು ಪುಟಿನ್ ಅವರೊಂದಿಗೆ ಚರ್ಚಿಸಲಿದ್ದಾರೆ. ಆಯಾ ದೇಶಗಳ ಮುಖ್ಯಸ್ಥರು ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಭಾರತದ ಪ್ರಧಾನಿ ಮೋದಿ ಮತ್ತು ತಮ್ಮ ದೇಶದ ಅಧ್ಯಕ್ಷ ಪುಟಿನ್ ನಡುವೆ ಮಾತುಕತೆ ನಡೆಯಲಿದೆ ಎಂದು ರಷ್ಯಾ ಈಗಾಗಲೇ ಘೋಷಿಸಿದೆ. ಭಾರತ ಮತ್ತು ರಷ್ಯಾ ನಡುವಿನ ವ್ಯೂಹಾತ್ಮಕ ಸ್ಥಿರತೆ ಹಾಗೂ ಏಷ್ಯಾ ಪೆಸಿಫಿಕ್ ವಲಯದ ಸಮಸ್ಯೆಗಳಂತಹ ವಿಷಯಗಳು ಚರ್ಚೆಯಾಗುವ ಲಕ್ಷಣಗಳಿವೆ. ಆದರೆ ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯದಿಂದ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲ. ಭಾರತ ಮತ್ತು ಚೀನಾ ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆಯೇ? ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!