ವೀರಾಜಪೇಟೆ-ಗೋಣಿಕೊಪ್ಪ ರಸ್ತೆಯಲ್ಲಿ ಹಸುವಿಗೆ ಡಿಕ್ಕಿ ಹೊಡೆದ ಸ್ಕೂಟರ್: ಸವಾರ ಸಾವು

ಹೊಸದಿಗಂತ ವರದಿ: ಮಡಿಕೇರಿ:

ರಸ್ತೆಯಲ್ಲಿದ್ದ ಹಸುವಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ವೀರಾಜಪೇಟೆಯಲ್ಲಿ ನಡೆದಿದೆ.
ಮೃತರನ್ನು ಅಂಬಟ್ಟಿ ಗ್ರಾಮದ ನಿವಾಸಿ ಸುಲೈಮಾನ್ ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ 8.30ರ ಸುಮಾರಿಗೆ ವೀರಾಜಪೇಟೆ-ಗೋಣಿಕೊಪ್ಪ ರಸ್ತೆಯ ಕಣ್ಣನ್ ಟೈರ್ ಶಾಪ್ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯಲ್ಲಿದ್ದ ಹಸುವಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಅವರು ಸ್ಥಳದಲ್ಲೇ ಸಾವಿಗೀಡಾದರೆಂದು ಹೇಳಲಾಗಿದೆ.
ವೀರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!