spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸ್ಕೂಟರ್ ಕಳವು: ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರು, ಆರೋಪಿ ಬಂಧನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಮಡಿಕೇರಿ ನಗರದಲ್ಲಿ ಇತ್ತೀಚೆಗೆ ನಡೆದ ಸ್ಕೂಟರ್ ಕಳವು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಕುಶಾಲನಗರದ ಯೋಗಾನಂದ ಬಡಾವಣೆಯ ನಿವಾಸಿ ತೌಸಿಫ್ (32) ಎಂದು ಗುರುತಿಸಲಾಗಿದೆ.
ಮಡಿಕೇರಿ ನಗರದ ಮಹದೇವಪೇಟೆಯ ಮಕಾನ್ ಗಲ್ಲಿಯ ಬಳಿ ಜೂ.25ರಂದು ವಿನೋದ್ ಕುಮಾರ ಎಂಬವರು ತಮ್ಮ ಕೆಎ12ಕೆ 7392ರ ಹೋಂಡಾ ಆಕ್ಟಿವಾ ಸ್ಕೂಟರನ್ನು ನಿಲ್ಲಿಸಿದ್ದು, ಅದನ್ನು ಯಾರೋ ಕಳವು ಮಾಡಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಮಡಿಕೇರಿ ನಗರ ಠಾಣೆ ಪೊಲೀಸರು, ಮಂಗಳವಾರ ಆರೋಪಿಯನ್ನು ಪತ್ತೆಹಚ್ಚಿ ಸುಮಾರು 35 ಸಾವಿರ ರೂ.ಮೌಲ್ಯದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರ ನಿರ್ದೇಶನದಂತೆ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಮಡಿಕೇರಿ ನಗರ ವೃತ್ತದ ವೃತ್ತ ನಿರೀಕ್ಷಕ ವೆಂಕಟೇಶ್ ಅವರ ನೇತೃತ್ವದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕಿ ಕು.ಅಂತಿಮಾ, ಅಪರಾಧ ಪತ್ತೆ ಕರ್ತವ್ಯದ ಸಿಬ್ಬಂದಿಗಳಾದ ಕೆ.ಕೆ.ದಿನೇಶ್, ಪ್ರವೀಣ್‌ ಬಿ.ಕೆ., ನಾಗರಾಜ್‌ ಕಡಗನ್ನವರ್, ಸಿಬ್ಬಂದಿಗಳಾದ ಅರುಣ್ ಕುಮಾರ್ ಬಿ.ಜಿ, . ಸಿ.ವಿ. ರವಿ, ದಿವ್ಯಾ, ಓಮನಾ ಅವರನ್ನೊಳಗೊಂಡ
ತಂಡವು ಜಿಲ್ಲಾ ಪೊಲೀಸ್ ಕಚೇರಿಯ ಸಿ.ಕೆ. ರಾಜೇಶ್ ಮತ್ತು ಗಿರೀಶ್ ಅವರ ಸಹಾಯದಿಂದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss