August 28, 2026
Friday, August 28, 2026
spot_img

ಒಂದೆಡೆ ಉರಿ ಬಿಸಿಲು, ಮತ್ತೊಂದೆಡೆ ತಂಪು ಮಳೆ: ಈ ರಾಜ್ಯಗಳಿಗಿದ್ಯಂತೆ ಉಷ್ಣ ಅಲೆ ಕಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಿಂದ ಜನರು ತತ್ತರಿಸುತ್ತಿರುವ ನಡುವೆಯೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ ಮಳೆ ಜನರಿಗೆ ಕೊಂಚ ನಿರಾಳತೆ ನೀಡಿದೆ.

ಕೆಲ ಪ್ರದೇಶಗಳಲ್ಲಿ ದಿಢೀರ್ ಮಳೆಯಾಗಿ ವಾತಾವರಣ ತಂಪಾಗಿದ್ದರೂ, ಮೇ 28ರವರೆಗೆ ಉಷ್ಣ ಅಲೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಉತ್ತರ ಪ್ರದೇಶದ ದಕ್ಷಿಣ ಭಾಗ, ವಿದರ್ಭ ಪ್ರದೇಶ ಹಾಗೂ ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾದ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಆಂಧ್ರ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಇದನ್ನೂ ಓದಿ:

ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಮೇ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ, ಕೇರಳ, ಲಕ್ಷದ್ವೀಪ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲೂ ಮುಂದಿನ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಗುಡುಗು ಸಹಿತ ಮಳೆಯ ಸಾಧ್ಯತೆ

ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಒಡಿಶಾ, ಪುದುಚೇರಿ ಹಾಗೂ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಮುಂದಿನ ಮೂರು ದಿನ ಗುಡುಗು-ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ತೀವ್ರ ವ್ಯತ್ಯಾಸ ಕಂಡುಬರುತ್ತಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಇಲಾಖೆ ಸಲಹೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !