ಓವರ್​ ಟೇಕ್ ಮಾಡಲು ಹೋಗಿ ಸ್ಕಾರ್ಪಿಯೋ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೆಲಂಗಾಣದ ಯೆರವಳ್ಳಿ ಮಂಡಳ್ ಜಂಕ್ಷನ್​ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು-ಲಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಆಂಧ್ರಪ್ರದೇಶದಿಂದ ಹೈದರಾಬಾದ್​​ಗೆ ಸ್ಕಾರ್ಪಿಯೋ ಕಾರು ಪ್ರಯಾಣಿಸುತ್ತಿತ್ತು. ಕಾರಿನಲ್ಲಿ ಒಟ್ಟು 7 ಪ್ರಯಾಣಿಕರಿದ್ದರು. ಯೆರವಳ್ಳಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಾರಿನ ಡ್ರೈವರ್ ತುಂಬಾ ಸ್ಪೀಡ್​ನಿಂದ ಬರುತ್ತಿದ್ದರು. ವೇಗವಾಗಿ ಹಿಂದಿನಿಂದ ಬಂದ ಸ್ಕಾರ್ಪಿಯೋ ಡ್ರೈವರ್​, ಲಾರಿಯನ್ನು ಓವರ್​ ಟೇಕ್ ಮಾಡಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ.

ಇಬ್ಬರು ಮಹಿಳೆಯರು, ಒಂದು ಮಗು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!