spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎಸ್.ಡಿ.ಎ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಭೇಟಿ, ಪರಿಶೀಲನೆ

- Advertisement -Nitte

ಹೊಸ ದಿಗಂತ ವರದಿ, ಯಾದಗಿರಿ:

ಕೆ.ಪಿ.ಎಸ್.ಸಿ ವತಿಯಿಂದ ನಡೆಯುತ್ತಿರುವ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಶನಿವಾರ ನಡೆಯುತ್ತಿವೆ.
ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ಭೇಟಿ ನೀಡಿ ಪರಿಶೀಲಿಸಿದರು.
ಎಸ್.ಡಿ.ಎ ಪರೀಕ್ಷೆ ಪರೀಕ್ಷೆ ಸುಸೂತ್ರವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅತ್ಯಂತ ಮುಂಜಾಗ್ರತೆಯನ್ನು ವಹಿಸಿ ಪರೀಕ್ಷೆ ಯಶಸ್ವಿಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಯಾದಗಿರಿ ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ್ ಇನ್ನಿತರರು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss