ಹೊಸದಿಗಂತ ಡಿಜಟಲ್ ಡೆಸ್ಕ್:
ರಾಜ್ಯದಲ್ಲಿ ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಬೇಟೆ ನಡೆಸಲು ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಬೆಂಗಳೂರಿನ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ ಪ್ರಾರಂಭಗೊಂಡಿದೆ.
ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ. ನೀಲಿ ಅಂಗಿ ಧರಿಸಿ, ರೇಷ್ಮೆಯ ಕೇಸರಿ ಮೈಸೂರು ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್ ನೀಡುತ್ತಿದ್ದಾರೆ.
ಮೋದಿ ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ಹೂಮಳೆ ಸುರಿಸಿ ಸಂಭ್ರಮಿಸಿ, ಎಲ್ಲೆಡೆ ಮೋದಿ ಮೋದಿ ಜೈಕಾರ ಘೋಷಣೆಗಳು ಜೋರಾಗಿ ಕೇಳಿಬರುತ್ತಿದೆ. ದಾರಿಯುದ್ದಕ್ಕೂ ಜನಜಂಗುಳಿ ಜೊತೆಗೆ ಇಡೀ ಬೆಂಗಳೂರೇ ಕೇಸರಿಮಯದಿಂದ ತುಂಬಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ.