ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆರಿಗೆ ಬಾಕಿ ಇರುವ ವಸತಿಯೇತರ ಕಟ್ಟಡಗಳ ಬಂದ್ ಮಾಡಿ, ಆಸ್ತಿ ತೆರಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೂಚನೆ ನೀಡಿದೆ.
ಬಿಬಿಎಂಪಿ ಆರ್.ಆರ್. ನಗರ ವಲಯ ವ್ಯಾಪ್ತಿಯಲ್ಲಿ ‘ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಡಿ’ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಪರಿಶೀಲನೆ ನಡೆಸಿದರು. ಇದೇ ವೇಳೆ ಲಗ್ಗೆರೆಯ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಆಲಿಸಿದರು. ಈ ವೇಳ ತ್ವರಿತವಾಗಿ ಆಸ್ತ ಮಾರಾಟ ಅಥವಾ ಹಸ್ತಾಂತರ ಮಾಡುವುದಿದ್ದರೆ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಕೂಡಲೇ ಇ-ಖಾತಾ ಪಡೆಯಬಹುದು. ಇ-ಖಾತಾ ಕಡ್ಡಾಯ ಗೊಳಿಸಿಲ್ಲ. ಭೂಪರಿವರ್ತನೆಯನ್ನು ಸುಲಭಗೊಳಿಸಲು ಅಧಿಕಾರಿಗಳು ಇ-ಖಾತೆ ಪ್ರಕ್ರಿಯೆಗಳನ್ನು ಸರಳೀಕರಿಸಬೇಕು ಎಂದು ಹೇಳಿದರು.
ಬಳಿಕ ಯಶವಂತಪುರದ ಎಂಇಐ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ 950 ಮೀಟರ್ ಉದ್ದದ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು, ವೇಗವಾಗಿ ಕಾಮಗಾರಿ ನಡೆಸಬೇಕು. ಪ್ರತಿವಾರ ಕಾಮಗಾರಿಯ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.