April 26, 2026
Sunday, April 26, 2026
spot_img

ಕೊಡಗಿನಲ್ಲಿ‌ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಮಹಿಳೆಗೆ ಮುಂದುವರಿದ ಶೋಧ: ಕೇರಳ‌ ವ್ಯಾಪ್ತಿಯಲ್ಲಿ‌ ಮೊಬೈಲ್??

ಹೊಸದಿಗಂತ ವರದಿ ​ಮಡಿಕೇರಿ:

ಚಾರಣಕ್ಕೆ ತೆರಳಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪೋಕ್ಲು ಸಮೀಪದ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ (36) ಎಂಬ ಮಹಿಳೆ ಗುರುವಾರ ಕೊಡಗಿನ ಅತ್ಯಂತ ಎತ್ತರದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದು, ಅಲ್ಲಿಂದ ವಾಪಾಸಾಗಿಲ್ಲ ಎಂದು ಹೇಳಲಾಗಿದೆ.

ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಒಬ್ಬಳೇ ಬಂದಿದ್ದ ಈ ಮಹಿಳೆಯನ್ನು, ಆ ವ್ಯಾಪ್ತಿಯಲ್ಲಿ ಕಾಡಾನೆ ಇರುವ ಹಿನ್ನೆಲೆಯಲ್ಲಿ ಬೇರೆ ಪ್ರವಾಸಿಗರ ಜೊತೆಯಲ್ಲಿ ಚಾರಣಕ್ಕೆ ಕಳುಹಿಸಲಾಗಿತ್ತೆನ್ನಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಸ್ಥಳೀಯರು ಅರಣ್ಯ ಸಿಬ್ಬಂದಿಗಳಿಗೆ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ:

ಈ ಬಗ್ಗೆ ಅಲ್ಲಿಯ ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಎಂಬವರು ನಾಪೋಕ್ಲು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅರಣ್ಯ ಇಲಾಖೆಯವರು, ಪೊಲೀಸರು ಹಾಗೂ ಗ್ರಾಮಸ್ಥರು ಬೆಟ್ಟದಲ್ಲೆಲ್ಲಾ ಹುಡುಕಾಡಿದರೂ ಮಹಿಳೆಯ ಸುಳಿವು ದೊರೆತಿಲ್ಲ ಎನ್ನಲಾಗಿದೆ.

ಆಕೆಯ ಮೊಬೈಲ್ ಮಲೆಯಾಳಂ ನೆಟ್ವರ್ಕ್‌ನಲ್ಲಿರುವುದಾಗಿ ತಿಳಿದು ಬಂದಿದ್ದು, ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ, ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಅಲ್ಲಿಯೇ ಬೀಡು ಬಿಟ್ಟಿದ್ದು, ಶುಕ್ರವಾರ ಮತ್ತೆ ಶೋಧ ಕಾರ್ಯ ಮುಂದುವರೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !