ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಮಂಗಳವಾರ ಕೂಡ ಗುಂಡಿನ ಚಕಮಕಿ ನಡೆದಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಉಗ್ರರ ಬಗ್ಗೆ ಲಭಿಸಿರುವ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ನಾಗ್ಮಾರ್ಗ್‌ನಲ್ಲಿ ಶೋಧ ಕಾರ್ಯವನ್ನು ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳತ್ತ ಭಯೋತ್ಪಾದಕರು ಗುಂಡು ಹಾರಿಸಿದ್ದು, ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿದ್ದಾರೆ.