ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯವಾಗಿದೆ. ಈ ಕುರಿತು ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಅನ್ನು ಧರಿಸದೇ ವಾಹನವನ್ನು ಚಲಾಯಿಸಿದ್ರೇ ಅಂತವರಿಗೆ 1 ಸಾವಿರ ದಂಡ ವಿಧಿಸಲಾಗುತ್ತದೆ ಎಂದಿದ್ದಾರೆ.
ಅಂದಹಾಗೇ ವಾಹನ ಚಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸದೇ ಇದ್ದರೇ ಅಪಘಾತವಾದಂತ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವುದಿಲ್ಲ. ಹೀಗೆ ಏರ್ ಬ್ಯಾಗ್ ಓಪನ್ ಆಗದೇ ಇದ್ದಾಗ ಅಪಘಾತದ ವೇಳೆಯಲ್ಲಿ ಸಾವು ನೋವು ಸಂಭವಿಸಿವೆ. ಈ ಹಿನ್ನಲೆಯಲ್ಲಿಯೇ ಕೇಂದ್ರ ಸರ್ಕಾರ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸೋ ಕರಡನ್ನು ಪ್ರಕಟಿಸಿತ್ತು.