ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈಗೆ ಸ್ಥಾನ: ನಳಿನ್‍ಕುಮಾರ್ ಕಟೀಲ್ ಸಂತಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ಸ್ಥಾನ ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಬಿಜೆಪಿ ಉನ್ನತ ನಾಯಕತ್ವ ಕೈಗೊಂಡ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ರಾಜ್ಯದ ಪಕ್ಷದ ಹಿರಿಯರು, ಮಾರ್ಗದರ್ಶಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಸದೀಯ ಮಂಡಳಿಯಲ್ಲಿ ಸೇರಿಸಿರುವುದು ಮಹತ್ವದ ಕ್ರಮ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದೆಲ್ಲೆಡೆ ಪಕ್ಷದ ಸಂಘಟನೆ ಮತ್ತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ದೃಷ್ಟಿಯಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಅವರಿಗೆ ಪಕ್ಷದ ರಾಜ್ಯ ಘಟಕದ ಪರವಾಗಿ ಹಾಗೂ ವೈಯಕ್ತಿಕವಾಗಿ ಧನ್ಯವಾದ ಸಮರ್ಪಿಸುವುದಾಗಿ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!