ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಕಾರಣದಲ್ಲಿ ಈಗ ಸೀಟ್ ರಾಜಕಾರಣ ಶುರುವಾಗಿದೆ. ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿವಾದಗಳ ಸಮರ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷ 50 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ವಿರೋಧ ಪಕ್ಷದ ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಪ್ರಧಾನಿ ಮೋದಿ ಅವರು ಭವಿಷ್ಯ ನುಡಿದಿದ್ದಾರೆ.
ಇದಕ್ಕೆ ಕಾಂಗ್ರೆಸ್ ಕೂಡ ವಿರೋಧ ವ್ಯಕ್ತಪಡಿಸಿದ್ದು. ಬಿಜೆಪಿ 180 ಸ್ಥಾನಗಳನ್ನೂ ಗೆಲ್ಲಲ್ಲ. ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.