Tuesday, October 21, 2025

ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು, ಆರ್‌ಜೆಡಿಯಿಂದ 143 ಅಭ್ಯರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನೂ ಕೆಲವೇ ದಿನ ಬಾಕಿ ಇದೆ. ಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೂ 143 ಅಭ್ಯರ್ಥಿಗಳನ್ನ ಕಣಕ್ಕಿಳಿದೆ.

ನವೆಂಬರ್ 6 ಮೊದಲ ಮತ್ತು ನ.11 ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಹೊರಬೀಳಲಿದೆ. 

ಮಹಾಘಟಬಂಧನ್ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಹೆಸರಿಗೆ ಇಂಡಿ ಒಕ್ಕೂಟವಾದ್ರೂ ಯಾರೂ ಒಗ್ಗಟ್ಟಿಲ್ಲ. ಬಿಹಾರ ಗೆಲ್ಲಲು ಯಾವುದೇ ಪ್ಲ್ಯಾನ್‌ ಮಾಡದ ಇಂಡಿ ನಾಯಕರ ನಡೆಯಿಂದ ಬಿಜೆಪಿ-ಜೆಡಿಯುಗೆ ಅಸ್ತ್ರ ಸಿಕ್ಕಂತಾಗಿದೆ. ಇಂಡಿ ನಾಯಕರಿಗೆ ಬಿಹಾರದ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎನ್ನುವ ಆಸೆ ಇದ್ದಂತಿಲ್ಲ ಎಂಬ ಚರ್ಚೆ ಶುರುವಾಗ್ತಿದೆ. ಸೀಟು ಹಂಚಿಕೆ ಬಿಕ್ಕಟ್ಟು ನಡುವೆಯೇ ಆರ್‌ಜೆಡಿ-ಕಾಂಗ್ರೆಸ್‌ನಿಂದ ಪ್ರತ್ಯೇಕ ಪಟ್ಟಿ ರಿಲೀಸ್ ಆಗಿದೆ.

ವೈಶಾಲಿ ಜಿಲ್ಲೆಯ ರಘೋಪುರ್ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕಣಕ್ಕಿಳಿದಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಮುಂದುವರಿದಿದ್ದ ಸೀಟು ಹಂಚಿಕೆ ಬಿಕ್ಕಟ್ಟಿನ ಕಾರಣ, ಆರ್‌ಜೆಡಿ ಇದುವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. 2020ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿಯ ಚುನಾವಣೆಯಲ್ಲಿ ಆರ್‌ಜೆಡಿ ಒಂದು ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ.

error: Content is protected !!