ಸೆ. 15ಕ್ಕೆ ಪದ್ಮ ಪ್ರಶಸ್ತಿಗಳಿಗೆ ಆನ್‌ ಲೈನ್ ಮೂಲಕ ನಾಮನಿರ್ದೇಶನ ಮಾಡಲು ಲಾಸ್ಟ್ ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2024 ರ ಪದ್ಮ ಪ್ರಶಸ್ತಿಗಳಿಗೆ ಆನ್‌ ಲೈನ್ ಮೂಲಕ ನಾಮನಿರ್ದೇಶನ ಮಾಡಲು ಅವಕಾಶವಿದ್ದು, ಈ ತಿಂಗಳ 15 ರವರೆಗೆ ನಿಮಗಿದೆ ಅವಕಾಶ.

ಈ ವರ್ಷದ ಮೇ 1 ರಂದು ನಾಮನಿರ್ದೇಶನ ಪ್ರಾರಂಭವಾಯಿತು. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಮುಂದಿನ ವರ್ಷದ ಗಣರಾಜ್ಯೋತ್ಸವದಂದು ಪ್ರಶಸ್ತಿಯನ್ನು ಪ್ರಕಟಿಸಲಾಗುವುದು. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. ಎಲ್ಲಾ ಕ್ಷೇತ್ರಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಗಾಗಿ ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!