ಸೆ. 2ರಂದು ಮಂಗಳೂರಿನಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ,ಮಂಗಳೂರು:

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.2ರಂದು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ ರಜೆ ಪ್ರಕಟಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮ ತರಗತಿಗಳಿಗೆ ರಜೆ ಇರಲಿದೆ. ಅದೇಶ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸಲಿದೆ.
ರಜೆಯಲ್ಲಿನ ಬಾಕಿ ಪಠ್ಯ ಕ್ರಮವನ್ನು ಇತರ ರಜಾ ದಿನಗಳಲ್ಲಿ ಹೊಂದಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!