ಸೆ. 21 ರಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಸಂಸದೆ ಅತಿಶಿ ಸೆಪ್ಟೆಂಬರ್ 21 ರಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.

“ಅತಿಶಿ ಸೆಪ್ಟೆಂಬರ್ 21 ರಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಅವರ ಜೊತೆಗೆ ಇತರ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ಹೇಳಿಕೆಯಲ್ಲಿ ತಿಳಿಸಿದೆ.

ಮುಂದಿನ ದಿಲ್ಲಿ ಮುಖ್ಯಮಂತ್ರಿಯಾಗಲು ಪಣತೊಟ್ಟಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು, ನಿರ್ಗಮಿತ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸದ ಬಗ್ಗೆ ನನಗೆ ಸಂತೋಷವಾಗಿದೆ ಆದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕಾಗಿ ಬೇಸರವಾಗಿದೆ ಎಂದು ಹೇಳಿದ್ದಾರೆ.

ಮುಂದಿನ ಕೆಲವು ತಿಂಗಳುಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಕೇಜ್ರಿವಾಲ್ ಅವರನ್ನು ಮರಳಿ ಮುಖ್ಯಮಂತ್ರಿಯನ್ನಾಗಿ ಮಾಡಲು ಶ್ರಮಿಸುವುದಾಗಿ ಅತಿಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

 

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!