spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆ. 17ಕ್ಕೆ ರಾಜ್ಯದಲ್ಲಿ ನಡೆಯಲಿದೆ ಬೃಹತ್ ಕೊರೋನಾ ಲಸಿಕೆ ಅಭಿಯಾನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸೆಪ್ಟೆಂಬರ್ 17ರಂದು ಕರ್ನಾಟಕದಲ್ಲಿ ಬೃಹತ್ ಕೊರೋನಾ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೃಹತ್ ಅಭಿಯಾನ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ಸಂಜೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಹಾಗೂ ಕೋವಿಡ್ ನಿರ್ವಹಣಾ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.
ತ್ವರಿತವಾಗಿ ಕೊರೊನಾ ಲಸಿಕೆ ವಿತರಣೆ ಮಾಡುತ್ತಿರುವ ದೇಶದ 5 ರಾಜ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಸೆ.17ರಂದು ರಾಜ್ಯದಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಸರ್ಕಾರ ಸಿದ್ಧತೆ ನಡೆಸಲಾಗಿದೆ.
ಅಮೆರಿಕ ಮುಂತಾದ ವಿದೇಶಗಳಿಗಿಂತಲೂ ವೇಗವಾಗಿ ಭಾರತದ ಕರ್ನಾಟಕ, ಗುಜರಾತ್, ಮಧ್ಯಪ್ರದೇಶ, ಹರಿಯಾಣ, ಉತ್ತರ ಪ್ರದೇಶದಲ್ಲಿ ಲಸಿಕೆಗಳನ್ನು ವಿತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು.
2021ರ ಅಂತ್ಯದ ವೇಳೆಗೆ ಭಾರತದ ಎಲ್ಲ ನಾಗರಿಕರಿಗೂ ಲಸಿಕೆ ನೀಡುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆಗಳನ್ನು ವಿತರಣೆ ಮಾಡುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss